ಬಸವಣ್ಣ   
  ವಚನ - 1233     
 
ಧ್ಯಾನಕ್ಕೆ ಮೋನವೆಂಬ ಶಸ್ತ್ರವ ಪಿಡಿಯಲರಿಯದೆ ಅಹಂಕಾರದ ಧಾರೆಯ ಮೊನೆಯಲಗೆಂಬ ಶಸ್ತ್ರವ ಪಿಡಿದು ಕೆಟ್ಟೆನಯ್ಯಾ. ಅಂಜುವೆನಂಜುವೆನಯ್ಯಾ, ಜಂಗಮಲಿಂಗವೆಂಬ ಭಾಷೆ ಪಲ್ಲಟವಾಯಿತ್ತು. ಇನ್ನು ಜಂಗಮವೆಂಬ ಶಿಕ್ಷಾಶಸ್ತ್ರದಲ್ಲಿ ಎನ್ನ ಹೊಯ್ದು ಬಯ್ದು ರಕ್ಷಿಸುವುದು ಕೂಡಲಸಂಗಮದೇವಾ.