ಬಸವಣ್ಣ   
  ವಚನ - 1241     
 
ನಾನಾರಿದೆಲ್ಲಿಯ ಪಾಶವಿದೆತ್ತಣ ಮರವೆ, ಅಕಟಕಟಾ ತಾಮಸಕ್ಕೆ ಗುರಿಮಾಡಿದೆಯಲ್ಲಾ. ಎಲೆ ಕರುಣಾಂಬುನಿಧಿಯೆ, ದಯಾಪಾರಿಯೆ, ನೀನು ವಿಚಾರಿಸದಿರ್ದಡಾನೆಂತುಳಿವೆನಯ್ಯಾ. ನಿಮ್ಮ ಕೃಪಾದೃಷ್ಟಿಯಿಂ ನಿರೀಕ್ಷಿಸಿ, ನಿಮ್ಮತ್ತ ಸಾರುವಂತೆ ಮಾಡಾ ಕೂಡಲಸಂಗಮದೇವಾ.