ಬಸವಣ್ಣ   
  ವಚನ - 1242     
 
ನಾನಾ ಸ್ಥಾನದಲ್ಲಿ ಬಂದು ತೊಳಲಿ ಬಳಲಿ ಅಳಿದುಳಿದು ನಿಂದ ನಿಲದವನಲ್ಲ, ಮರ್ತ್ಯಲೋಕದಲ್ಲಿ ಶಿವಾಚಾರದ ಘನವುಹೂಳಿಹೋಯಿತ್ತೆಂದು ಕರ್ತನು ತಾನೆ ಮಹಾಪ್ರಸಾದಿಯಾಗಿ ಉದಯವಾದನು. ಹಸ್ತಮಸ್ತಕ ಸಂಯೋಗವಿಲ್ಲದ ಮುನ್ನವೆ ಆದಿಗುರು ಅನಾದಿಶಿಷ್ಯನೆಂಬುದ ನೆಲೆಮಾಡಿ, ಸಂಗಮನಾಥನೆಂಬ ಲಿಂಗವನೆನ್ನ ಕೈಯಲ್ಲಿ ಕೊಟ್ಟು, ಸಾಮದಿಂದ ಅನುಗ್ರಹಿಸಿಕೊಂಡನು. ಎನ್ನ ಹಿಂದಣ ಪೂರ್ವಾಪರವನೆತ್ತಿ ತೋರಿ ತನ್ನತ್ತ ತೆಗೆದುಕೊಂಡನು, ಕೂಡಲಸಂಗಮದೇವರಲ್ಲಿ ಜೆನ್ನಬಸವಣ್ಣನು.