ಬಸವಣ್ಣ   
  ವಚನ - 1253     
 
ನಿಮ್ಮ ಕಂಡು, ಕೈಮುಗಿದು, ನಿಮಗೆ ಭಕ್ತನಾದೆನಲ್ಲದೆ, ನಿಮ್ಮ ಕಾಣದಲೆ ಕೈಮುಗಿವ ಭಕ್ತಿಯುಂಟೆ ಅಯ್ಯಾ? ನಿಮ್ಮ ಮುಟ್ಟಿ ಪೂಜಿಸಿ ಆಚಾರಿಯಾದೆನಲ್ಲದೆ, ನಿಮ್ಮ ಮುಟ್ಟದಲೆ ಎನಗಾಚಾರವೆಲ್ಲಿಯದಯ್ಯಾ? ನಿಮ್ಮ ಘನವನು ಮನದಲ್ಲಿ ನೆನೆದು ಧರಿಸಿದ ಕಾರಣ ಜ್ಞಾನೋದಯವಾಯಿತ್ತಲ್ಲದೆ, ನೀವಿಲ್ಲದಡೆ ಎನಗೆ ಜ್ಞಾನವೆಲ್ಲಿಯದಯ್ಯಾ? ಇಂತು ಆವ ಮುಖದಲ್ಲಿಯೂ ಎನ್ನನಾಗುಮಾಡಲೆಂದು ನೀವು ಮುಂದುಗೊಂಡಿದ್ದ ಕಾರಣ, ನಿಮ್ಮ ಸನ್ನಿಧಿಯಲಾನು ಸದಾಚಾರಿಯಾದಡೆ, ನಿಮಗಾನು ಸರಿಯೆ? ಕೂಡಲಸಂಗಮದೇವಾ, ಜಂಗಮಮುಖದಿಂದ ಸಂಗನಬಸವಣ್ಣ ಬದುಕಿದನೆಂಬುದ ಮೂರು ಲೋಕವೆಲ್ಲವೂ ಬಲ್ಲುದು ಕಾಣಾ ಪ್ರಭುವೆ.