ಬಸವಣ್ಣ   
  ವಚನ - 1259     
 
ನೆಲ್ಲ ಗಿಡುವಿನೊಳಗೆ ನಾನೊಂದು ಹುಲ್ಲಾಗಿ ಹುಟ್ಟಿದೆನಯ್ಯಾ. ಆನು ಭಕ್ತನೆಂದೆಂಬೆನೆ, ಆನು ಯುಕ್ತನೆಂದೆಂಬೆನೆ ಆನು ಕೂಡಲಸಂಗನ ಶರಣರೊಕ್ಕುದನುಂಡಡೆ, ಪಾದರಕ್ಷೆಗೆ ಸರಿಯಹೆನೆ?