ಬಸವಣ್ಣ   
  ವಚನ - 1263     
 
ಪಂಚೇಂದ್ರಿಯಂಗಳರತು ತನುಮನವ ನಿಲಿಸಬಲ್ಲಡೆ ಚೆನ್ನನ ಪ್ರಸಾದ ಲಿಂಗಕ್ಕೋಗರವಾಗದೆ? ನಾಲಗೆಯ ರುಚಿಯ ನಾಣಕ್ಕೆ ತಂದು ಮರಳಿ ಲಿಂಗಾರ್ಪಿತವ ಮಾಡಿದಡೆ, ಮನದ ಭಾವವ ಕೈಕೊಂಡ ಕಾರಣ, ನಮ್ಮ ಕೂಡಲಸಂಗಮದೇವನಿಗೆ ಕೊಡಬಹುದು ಕಾಣಾ, ಪ್ರಭುವೆ.