ಬಸವಣ್ಣ   
  ವಚನ - 1268     
 
ಪುಣ್ಯಗಳಹ ಕಾಲಕ್ಕೆ ಹಗೆಗಳು ತನ್ನವರಹರು, ಪುಣ್ಯಗಳಹ ಕಾಲಕ್ಕೆ ಮಣ್ಣು ಹೊನ್ನಹುದು, ಪುಣ್ಯಗಳಹ ಕಾಲಕ್ಕೆ ಹಾವು ಲೇವಳವಹುದು, ಪುಣ್ಯಗಳಹ ಕಾಲಕ್ಕೆ ಅನ್ಯರು ತನ್ನವರಹರು. ಇಂತಪ್ಪ ಪುಣ್ಯಂಗಳೆಲ್ಲವೂ ಭಕ್ತಿಯಿಂದಹುದು, ಭಕ್ತಿ ಕೆಟ್ಟಡೆ ಪುಣ್ಯವು ಕೆಡುವುದು. ಇಂತಪ್ಪ ಭಕ್ತಿಯೂ ಪುಣ್ಯವೂ ಚೆನ್ನಬಸವಣ್ಣನಿ(ಂದು)ಂಟಾಗಿ, ನಾನು ಬದುಕಿದೆನಯ್ಯಾ, ಕೂಡಲಸಂಗಮದೇವಾ.