ಬಸವಣ್ಣ   
  ವಚನ - 1271     
 
ಪ್ರಸಾದಿಯ ಪ್ರಸಾದದಲೊದಗಿದ ಪ್ರಸಾದಿಯನು ಏನೆಂದುಪಮಿಸುವೆನು? ಏನೆಂದು ಸ್ತುತಿಸುವೆನಯ್ಯಾ, ಮಹಾಪ್ರಸಾದಿಗೆ ಮಹಾಘನಪ್ರಸಾದವಾದ ಪ್ರಸಾದಿಯನು? ಅಗಮ್ಯಪ್ರಸಾದದಲ್ಲಿ ಸ್ವಾಯತವಾದ ಕೂಡಲಸಂಗಮದೇವಾ, ನಿಮ್ಮ ಶರಣ ಚೆನ್ನಬಸವಣ್ಣಂಗೆ ನಮೋ ನಮೋ ಎಂಬೆನು.