ಬಸವಣ್ಣ   
  ವಚನ - 1275     
 
ಬಡಗವಾಗಿಲ ಪೌಳಿಯ ಭರವಸದಿಂ ಪೊಕ್ಕು, ಪಶ್ಚಿಮದ್ವಾರದ ಧವಳಾರಮಂ ಪಶ್ಚಿಮದಿ ಪೊಕ್ಕು, ತ್ರಿವಿಧಗತಿಯ ಶೂನ್ಯಸಿಂಹಾಸನದ ಮೇಲೆ ತರಹರವಾದಡೆ ನಂಬುವುದೆನ್ನ ಮನವು. ಕೂಡಲಸಂಗಮದೇವರು ಸಾಕ್ಷಿಯಾಗಿ. ನೀನು ನಮ್ಮ ಕೋಪಿಸಿದಡೆ ಕೋಪಿಸು, ಚೆನ್ನಬಸವಣ್ಣಾ.