ಬಸವಣ್ಣ   
  ವಚನ - 1278     
 
ಬಸವನಿದ್ದಂತೆ ಊರ ಪಶುವನೊಯಿವರೆ ಸಂಗಯ್ಯಾ? ಕಗ್ಗಾಯಿಯಿದ್ದಂತೆ ಹೂಮಿಡಿಯನೊಯಿವರೆ ಸಂಗಯ್ಯಾ? ನಾನಿದ್ದಂತೆ ನನ್ನ ಶಿಶು ಸಂಗಯ್ಯನನೊಯಿವರೆ ಕೂಡಲಸಂಗಯ್ಯಾ.