ಬಸವಣ್ಣ   
  ವಚನ - 1279     
 
ಬಸುರೆ ಬಾಯಾಗಿ, ಬಾಯಿ ಬಸುರಾಗಿಪ್ಪುದ ತೊಡೆದ, ಕಣ್ಣೆ ತಲೆಯಾಗಿ, ತಲೆಯೆ ಕಣ್ಣಾಗಿರಿಸಿದ, ಕಾಲೆ ಕೈಯಾಗಿ, ಕೈಯೆ ಕಾಲಾಗಿ ನಡೆಸಿದ, ನೆಳಲನುಟ್ಟು ಸೀರೆಯನೆನಗೆ ಉಡುಗೊರೆಯ ಕೊಟ್ಟನು, ಮಥನವಿಲ್ಲದ ಸಂಗಸುಖವನೆನಗೆ ತೋರಿದನು. ಕೂಡಲಸಂಗಮದೇವಾ, ಪ್ರಭುವಿನ ಶ್ರೀಪಾದಕ್ಕೆ ಶರಣೆನುತ್ತಿರ್ದೆನು.