ಬಸವಣ್ಣ   
  ವಚನ - 1282     
 
ಬಿತ್ತು ಬೆಳೆಯಿತ್ತು, ಕೆಯ್ಯ ಕೊಯ್ಯಿತ್ತು, ಗೂಡು ಮುರಿಯಿತ್ತು, ಕುತ್ತುರಿಯೊಟ್ಟಿತ್ತು, ಒಕ್ಕಿತ್ತು ತೂರಿತ್ತು ಅಳೆಯಿತ್ತು, ಸಲಗೆ ತುಂಬಿತ್ತು. ಕೂಡಲಸಂಗಮದೇವಯ್ಯಾ ಮೇಟಿ ಕಿತ್ತಿತ್ತು, ಕಣ ಹಾಳಾಯಿತ್ತಯ್ಯಾ.