ಬಸವಣ್ಣ   
  ವಚನ - 1288     
 
ಭಂಡವ ತುಂಬಿದ ಬಳಿಕ ಸುಂಕವ ತೆತ್ತಲ್ಲದೆ ವಿರಹಿತ ಹೋಗಬಾರದು. ಲಿಂಗಸಂಬಂಧಿಯಾದಡೆ ಜಂಗಮಪ್ರೇಮಿ ನೀನಾಗು, ಅಲ್ಲದಿದ್ದಡೆ ಪರುಷ ದೊರೆಕೊಳ್ಳದಯ್ಯಾ, ಜಂಗಮದಲ್ಲಿ ನಿರುತ ಭರಿತ, ಕೂಡಲಸಂಗಮದೇವ.