ಬಸವಣ್ಣ   
  ವಚನ - 1301     
 
ಮತಿಗೆಟ್ಟು ಧೃತಿಗುಂದಿ ಬೇಳಾದೆನಯ್ಯಾ, ಗತಿಗೆಟ್ಟು ವ್ರತಗೆಟ್ಟು ಧಾತುಗೆಟ್ಟ ಬಾಹಿರ ನಾನಯ್ಯಾ, ಕಹಿಸೋರೆ ಮುತ್ತಂತಾಯಿತ್ತೆನ್ನ ಭಕ್ತಿ. ನಡೆಲಿಂಗ ಜಂಗಮ ಮನೆಗೆ ಬರಲು ಇಂಬುಗೊಳಲರಿಯದೆ ಕೆಟ್ಟ ಕೇಡನೇನೆಂದುಪಮಿಸುವೆನಯ್ಯಾ, ನವರತ್ನವ ಕಿತ್ತು ಮಡುವಿನೊಳಗೆ ಹಾಯ್ಕಿದ ಕಪಿಯಂತಾಯಿತ್ತೆನ್ನ ಭಕ್ತಿ. ಕೂಡಲಸಂಗಮದೇವರ ತಂದುಕೊಟ್ಟಡೆ ನಿಮ್ಮ ಚಮ್ಮಾವುಗೆಯ ಹೊತ್ತು ಕುಣಿದಾಡುವೆನು ಕಾಣಾ, ಚೆನ್ನಬಸವಣ್ಣಾ.