ಬಸವಣ್ಣ   
  ವಚನ - 1307     
 
ಮರ ಗಿಡು ಬಳ್ಳಿ ಧಾನ್ಯಂಗಳ ಬೆಳಸೆಲ್ಲವ ತರಿತರಿದು ಪ್ರಾಣವ ಕೊಂದುಂಡು, ಶರೀರವ ಹೊರೆವ ದೋಷಕ್ಕೆ ಇನ್ನಾವುದು ವಿಧಿಯಯ್ಯಾ? ಒಂದಿಂದ್ರಿಯ ಮೊದಲಾಗಿ ಐದಿಂದ್ರಿಯ ಕಡೆಯಾದ ಜೀವಜಾಲದಲ್ಲಿದೆ ಚರಾಚರವೆಲ್ಲ. ಅದು ಕಾರಣ, ಕೂಡಲಸಂಗನ ಶರಣರು ಲಿಂಗಕ್ಕರ್ಪಿಸಿ ಪ್ರಸಾದವ ಕೊಂಡು ನಿರ್ದೋಷಿಗಳಾಗಿ ಬದುಕಿದರು.