ಬಸವಣ್ಣ   
  ವಚನ - 1310     
 
ಮರುಳ ಹಿಡಿದಿಹೆನೆಂಬವರು ಮರುಳಾಗಿ ಹಿಡಿಯಬೇಕು ಕೇಳಿರೆ. ಬಹುಬುದ್ಧಿಯ ಜಡರಿಗೆ ಹಿಡಿಯಬಾರದು. ನಿರವಯಲ ಬಯಲ ಹಿಡಿಯಬಹುದೆ? ಕೂಡಲಸಂಗಮದೇವರ ಭಾವಶಸ್ತ್ರದಿಂದ ಗೆಲಿದುಕೊಂಡು ಬನ್ನಿ.