ಬಸವಣ್ಣ   
  ವಚನ - 1313     
 
ಮಾಡುವಂತಿರಬೇಕು, ಮಾಡದಂತಿರಬೇಕು. ಮಾಡುವ ಮಾಟದೊಳಗೆ ತಾನಿಲ್ಲದಂತಿರಬೇಕು. ಕೂಡಲಸಂಗಮದೇವರ ನೆನೆವುತ್ತ ನೆನೆವುತ್ತ ನೆನೆಯದಂತಿರಬೇಕು.