ಬಸವಣ್ಣ   
  ವಚನ - 1318     
 
ಮುಗಿಲ ಮರೆಯ ಮಿಂಚಿನಂತೆ, ಒಡಲ ಮರೆಯ ಆತ್ಮನಂತೆ, ನೆಲದ ಮರೆಯ ನಿಧಾನದಂತೆ ಇಪ್ಪ, ನಿಮ್ಮ ನಿಲವನಾರು ಬಲ್ಲರು ದೇವಾ? ನಿಮ್ಮ ನಿಲವ ಹಲಕಾಲದಿಂದ ಕಂಡು ಕಂಡು ಕಡೆಗಣಿಸಿ, ಮರೆದು ಮತಿಗೆಟ್ಟು ಮರುಳಾದೆನು. ಎನ್ನ ತಪ್ಪಿಂಗೆ ಕಡೆಯಿಲ್ಲ ಕಾಣಾ ತ್ರಾಹಿ ತ್ರಾಹಿ ಕಾಯಯ್ಯಾ, ಕೂಡಲಸಂಗಮದೇವಾ.