ಬಸವಣ್ಣ   
  ವಚನ - 1319     
 
ಮುದ್ದ ನೋಡಿ, ಮುಖವ ನೋಡಿ, ಮೊಲೆಯ ನೋಡಿ, ಮುಡಿಯ ನೋಡಿ, ಕರಗಿ ಕೊರಗುವುದೆನ್ನ ಮನ, ಲಿಂಗದೇವನ ಧ್ಯಾನವೆಂದಡೆ ಕರಗಿ ಕೊರಗದೆನ್ನ ಮನ. ಆನು ಭಕ್ತನೆಂಬಡೆ ಲಜ್ಜೆಯಿಲ್ಲ ನೋಡಯ್ಯಾ. ಎನ್ನ ತಂದೆ ಕೂಡಲಸಂಗಮದೇವಯ್ಯ ಒಲಿದು ಒಪ್ಪಗೊಂಡನಾದಡೆ, ಆನು ಚೆಂಗಳೆಯ ಬಸುರಲ್ಲಿ ಬಾರದಿಹೆನೆ.