ಬಸವಣ್ಣ   
  ವಚನ - 1325     
 
ರಂಗವಾಲೆಯೆಂದಡೆ ಅಂಗವಿಸದಯ್ಯಾ ಎನ್ನ ಮನವು, ಷಡುಸಮ್ಮಾರ್ಜನೆಯೆಂದಡೆ ಸೊಗಸದಯ್ಯಾ ಎನ್ನ ಮನಕ್ಕೆ. ಅದೇನು ಕಾರಣವೆಂದಡೆ, ಭಕ್ತರಂಗಳ ವಾರಣಾಸಿಯೆಂದುದಾಗಿ. ತಾ ಹುಟ್ಟಿ ತಮ್ಮವ್ವೆಯ ಬಂಜೆಯೆನ್ನಬಹುದೆ ಕೂಡಲಸಂಗಮದೇವಾ?