ಬಸವಣ್ಣ   
  ವಚನ - 1327     
 
ರೂಹಿಲ್ಲದಂಗೆ ಒಲಿದವರಿಗೆ ತನುವಿನ ಹಂಗುಂಟೆ? ಮನವಿಲ್ಲದವಂಗೆ ಮಚ್ಚಿದವರಿಗೆ ಅಭಿಮಾನದ ಹಂಗುಂಟೆ? ದಿಗಂಬರಂಗೆ ಒಲಿದವರಿಗೆ ಕೌಪೀನದ ಹಂಗುಂಟೆ? ಕೂಡಲಸಂಗಮದೇವಯ್ಯಾ, ಮಹಾದೇವಿಯಕ್ಕನೆಂಬ ಭಕ್ತೆಗೆ, ಅವ ಹೊರೆಯೂ ಇಲ್ಲ ನೋಡಾ, ಪ್ರಭುವೆ.