ಬಸವಣ್ಣ   
  ವಚನ - 1332     
 
ಲಿಂಗ ಜಂಗಮ, ಜಂಗಮ ಲಿಂಗವೆಂಬುದ ಎನಗೆ ತೋರಿದವರಾರಯ್ಯಾ? ಲಿಂಗವ ಪೂಜಿಸಿದಡೆ ಭವ ಹರಿಯದೆಂದು, ಜಂಗಮಮುಖ ಲಿಂಗವಾಗಿ ಬಂದು ಶಿಕ್ಷಿಸಿ, ರಕ್ಷಿಸಿ, ಎನ್ನ ಆದಿ ಅನಾದಿಯ ತೋರಿ, ಪ್ರಾಣಲಿಂಗ ಜಂಗಮವೆಂದು ಎನಗೆ ಪ್ರತಿಷ್ಠಿಸಿ ತೋರಿದಿರಾಗಿ, ಕೂಡಲಸಂಗಮದೇವಾ, ನಿಮ್ಮಿಂದಲಾನು ಬದುಕಿದೆನು ಕಾಣಾ, ಪ್ರಭುವೆ