ಬಸವಣ್ಣ   
  ವಚನ - 1339     
 
ಲಿಂಗವಿದ್ದಲ್ಲಿ ನಿಂದೆಯಿರದು, ನಿಂದೆಯಿದ್ದಲ್ಲಿ ಲಿಂಗವಿರದು, ಅವರೆಂತಿದ್ದಡೇನು? ಹೇಗಿದ್ದಡೇನು? ಲಿಂಗವಂತರವರು, ಉಪಮಿಸಬಾರದ ಮಹಾಘನವು ಕೂಡಲಸಂಗನ ಶರಣರು.