ಬಸವಣ್ಣ   
  ವಚನ - 1341     
 
ಲಿಂಗವೆಂತಿಪ್ಪುದೆಂದರಿಯೆನು, ಲಿಂಗದ ನಿಲವೆಂತುಟೆಂಬುದ ಹೋದ ಹೊಲಬನರಿಯೆನು, ಲಿಂಗಾರ್ಚನೆಯ ಮಾತು ಎನಗೇಕಯ್ಯಾ? ಜಂಗಮಲಿಂಗವಾಗಿ ಬಂದು ನೀವಿರುತ್ತಿರಲು, ಸ್ಥಾವರಕ್ಕೆ ಮಚ್ಚಿ ಮರುಳಾದೆನು. ಕೂಡಲಸಂಗಮದೇವಾ, ಎನ್ನ ತಪ್ಪನೆ ಎಣಿಸಿಹೆನೆಂದಡೆ ಕಡೆಯಿಲ್ಲ.