ಬಸವಣ್ಣ   
  ವಚನ - 1344     
 
ಲಿಂಗಾರ್ಪಿತವಿಲ್ಲದೆ ಬೋನ ಪದಾರ್ಥವ ಕೊಂಡಡೆ, ಮಕ್ಕಳಡಗು ನರಮಾಂಸವಯ್ಯಾ. ಲಿಂಗಾರ್ಪಿತವಿಲ್ಲದೆ ಉದಕವ ಮುಕ್ಕುಳಿಸಿದಡೆ ನಾಯ ಮೂತ್ರವ ಮುಕ್ಕಳಿಸಿದುದಯ್ಯಾ. ಲಿಂಗಾರ್ಪಿತವಿಲ್ಲದೆ ಹಲುಕಡ್ಡಿಯನಿರಿದಡೆ ನಾಯ ಎಲುಬಿದ್ದ ಮಲಕ್ಕೆ ಬಾಯಿದೆರೆದುದು. ನಿಮಗೆತ್ತಿದ ಕರವ ಅನ್ಯರಿಗೆ ಮುಗಿದಡೆ ಅಘೋರ ನರಕವಯ್ಯಾ. ಈ ಭಾಷೆಗೆ ತಪ್ಪಿದಡೆ ತಲೆದಂಡ ತಲೆದಂಡ, ಅಳವರಿಯದೆ ನುಡಿದೆನು, ಕಡೆಮುಟ್ಟಿ ನಡೆಸಯ್ಯಾ. ಪ್ರಭುವೆ ಕೂಡಲಸಂಗಮದೇವಾ.