ಬಸವಣ್ಣ   
  ವಚನ - 1348     
 
ವಚನನಾನುಭವವ ಮಾಡುವಯ್ಯಗಳಿರಾ, ನಿಮಗೆ ವಚನ ಪ್ರಾಣಲಿಂಗವೊ ಅಲ್ಲ, ದಾಸೋಹ ಪ್ರಾಣಲಿಂಗವೊ? ಆರೂಢವನೆ ಕಲಿತು ಅಂಗಸಂಗದಲಿಪ್ಪ ಆರೂಢ ಪ್ರಾಣಲಿಂಗವೊ? ಅಲ್ಲ, ದಾಸೋಹ ಪ್ರಾಣಲಿಂಗವೊ? ಬ್ರಹ್ಮವಿದ್ಯೆಯನೆ ಕಲಿತು, ಭ್ರಮೆಯೆಂಬ ಶೂಲದ ಮೇಲೆ ಕುಳ್ಳಿರ್ದು, ಆ ಬ್ರಹ್ಮವಿದ್ಯೆಯೆ ಪ್ರಾಣಲಿಂಗವೊ? ಅಲ್ಲ, ದಾಸೋಹವೆ ಪ್ರಾಣಲಿಂಗವೊ? ಎಲ್ಲ ಮಾತುಗಳ ಹಲ್ಲಣಿಸಿಕೊಂಡು, ಬಲು ಹುಲಿಯ ಬೆನ್ನಲಿ ಬಪ್ಪತೆರನಂತೆ. ಬಲ್ಲವರಿಗೆ ಬಲ್ಲವರು ನಮ್ಮ ಜಂಗಮದಾಸೋಹಿಗಳು. ಕೂಡಲಸಂಗಮದೇವರರಿತಡೆ ನಿಮ್ಮ ಹಲ್ಲ ಕಳೆವ ಕಾಣಿರೆ!