ಬಸವಣ್ಣ   
  ವಚನ - 1363     
 
ಶ್ವಾನ ಮಡಕೆಯನಿಳುಹಿ ಬೋನವನುಂಡು, ಮಡಕೆಯನೇರಿಸಲರಿಯದಂತೆ ನಾನು ಷಟ್‍ಸ್ಥಲವನೋದಿ ಏನ ಮಾಡುವೆನಯ್ಯಾ, ಅವಗುಣಂಗಳೆನ್ನ ಬೆನ್ನ ಬಿಡದನ್ನಕ್ಕರ? ಕಾರ್ಯವುಳ್ಳ ಕರ್ತ ಜಂಗಮಲಿಂಗದಲ್ಲಿ ನಾನು ದಾಸೋಹವ ಮಾಡಲರಿಯದೆ ಕೆಟ್ಟೆನು. ಕೂಡಲಸಂಗಮದೇವಾ.