ಬಸವಣ್ಣ   
  ವಚನ - 1364     
 
ಶ್ರೀಗುರುಕರುಣಿಸಿ ಹಸ್ತಮಸ್ತಕಸಂಯೋಗದಿಂದ ಪ್ರಾಣಲಿಂಗವನು ಕರತಳಾಮಳಕವಾಗಿ ಕರಸ್ಥಲಕ್ಕೆ ತಂದುಕೊಟ್ಟನಾಗಿ, ಒಳಗೆನ್ನದೆ ಹೊರಗೆನ್ನದೆ, ಆ ಲಿಂಗದಲ್ಲಿ ನಚ್ಚಿ ಮಚ್ಚಿ ಹರುಷದೊಳೋಲಾಡಿದೆ, ಅದೆಂತೆಂದಡೆ, 'ಯತೋ ವಾಚೋ ನಿವರ್ತಂತೇ ಅಪ್ರಾಪ್ಯ ಮನಸಾ ಸಹ ನಾದಬಿಂದುಕಲಾತೀತಂ ಗುರುಣಾ ಲಿಂಗಮುದ್ಭವಂ' ಎಂದುದಾಗಿ ಆ ಲಿಂಗವ ಪಡೆದು ಆನಂದಿಸುವೆ, ಕೂಡಲಸಂಗಮದೇವಾ.