ಬಸವಣ್ಣ   
  ವಚನ - 1370     
 
ಸಂಸಾರಸರ್ಪನ ಹೇಳಿಗೆಯ ಬಿಡಿಸಲು ಬಾರದು, ಬಿಟ್ಟಡೆ ಕಟ್ಟಲು ಬಾರದು ನೋಡಾ. ಬಿಡಿಸುವ ಬೆಡಗಿನ್ನೆಂತೊ? ಕಾಮಕ್ರೋಧಲೋಭಮೋಹಮದಮತ್ಸರವೆಂಬ ವಿಷದ ಹಲ್ಲಿಂಗಾವುದು ಗಾರುಡವಯ್ಯಾ, ಮಹಾದಾನಿ ಕೂಡಲಸಂಗಮದೇವಾ?