ಬಸವಣ್ಣ   
  ವಚನ - 1380     
 
ಸಮರತಿ ಸಮಸಂಧಾನದ ಸಂಗಸುಖವು ನಿನ್ನಿಂದಲೆನಗೆ ಸಾಧ್ಯವಾಯಿತ್ತಲ್ಲದೆ, ಎನಗೆ ತೋರಿದಪರಾರು ಹೇಳಾ ಲಿಂಗೈಕ್ಯದ ಹೊಲಬ? ಕೂಡಲಸಂಗಮದೇವರ ಶರಣ ಪ್ರಭುದೇವರಲ್ಲಿ ನೀನೆನ್ನನಿರಿಸದನ್ನಕ್ಕರ, ನಾನು ಬಲ್ಲೆನೆ ಹೇಳಾ.