ಬಸವಣ್ಣ   
  ವಚನ - 1390     
 
ಹದಿನಾರಿದ್ದಡೆ ಎಂಟಮಾಡುವ ಸಂಗಯ್ಯದೇವರು, ಎಂಟಿದ್ದಡೆ ನಾಲ್ಕಮಾಡುವ ಸಂಗಯ್ಯದೇವರು, ನಾಲ್ಕಿದ್ದಡೆ ಎರಡಮಾಡುವ ಸಂಗಯ್ಯದೇವರು, ಎರಡಿದ್ದಡೆ ಒಂದಮಾಡುವ ಸಂಗಯ್ಯದೇವರು, ಆ ಒಂದ ಇಲ್ಲವೆಯ ಮಾಡುವ ಸಂಗಯ್ಯದೇವರು, ತಿರಿಕನ ಶೋಭಿತನ ಮಾಡುವ ಸಂಗಯ್ಯದೇವರು, ತಿರಿ (ತಿ)ನಹೋದಡೆ ಹುಟ್ಟದೆನಿಸುವ ಸಂಗಯ್ಯದೇವರು. ಇದಾವುದಕ್ಕೂ ಸಡೆಯದಿದ್ದಡೆ ಕೂಡಲಸಂಗಮದೇವರು ತನ್ನಂತೆ ಮಾಡುವ.