ಬಸವಣ್ಣ   
  ವಚನ - 1391     
 
ಹಮ್ಮಿ ಹನ್ನೆರಡು ಸಂವತ್ಸರ ಹಿಂದಾಯಿತ್ತು, ಏನ ಮಾಡಿದಡೇನಯ್ಯಾ, ಎನ್ನಲ್ಲಿ ದಿಟವಿಲ್ಲದನ್ನಕ್ಕರ? ಏನ ಹಮ್ಮಿದಡೇನಯ್ಯಾ, ಎನ್ನಲ್ಲಿ ದಿಟವಿಲ್ಲದನ್ನಕ್ಕರ? ಎನ್ನ ಪುಣ್ಯದ ಫಲ, ಕೂಡಲಸಂಗಮದೇವಾ, ಬಾಯಿನದುಂಡೆಗೆ ತೋಯನಟ್ಟಂತಾಯಿತ್ತು.