ಬಸವಣ್ಣ   
  ವಚನ - 1395     
 
ಹಸಿದಳುವ ಶಿಶುವಿಂಗೆ ತಾಯಿ ಮೊಲೆಯ ಕೊಟ್ಟಡೆ, ಆ ಶಿಶು ಜೀವಿಸದಿಪ್ಪುದೆ ಹೇಳಾ, ಅಯ್ಯಾ? ಪ್ರಾಣವಲ್ಲಭನ ಅಗಲಿಕೆಯಿಂದ ಪ್ರಾಣವಿಯೋಗವಾಗಿಹ ಹೆಂಗೂಸಿಂಗೆ ಆ ಪ್ರಾಣವಲ್ಲಭ ಬಂದಡೆ ವಿರಹ ಸಂತವಿಸದಿಪ್ಪುದೆ ಹೇಳಾ, ಅಯ್ಯಾ? ಕೂಡಲಸಂಗಮದೇವರು ಸಾಕ್ಷಿಯಾಗಿ ಪ್ರಭುವೆನ್ನ ಮನೆಗೆ ಬಂದಡೆ ಎನ್ನ ಬಯಕೆ ಕೈಸಾರಿ ಚೆನ್ನಬಸವಣ್ಣನ ಕರುಣದ ಕಂದನಾಗಿ ಉಳಿದೆನು ಕಾಣಾ, ಮಡಿವಾಳಯ್ಯಾ.