ಬಸವಣ್ಣ   
  ವಚನ - 1401     
 
ಹಾದರದ ಮಿಂಡನ ಹತ್ತಿರ ಮಡಗಿಕೊಂಡು, ಮನೆಯ ಗಂಡನ ಒಲ್ಲೆನೆಂದಡೆ ಒಲಿವನೆ? ತಾ ಶಿವಭಕ್ತನಾಗಿ, ತನ್ನಂಗದ ಮೇಲೆ ಲಿಂಗವಿದ್ದು ಮತ್ತೆ ಭಿನ್ನಶೈವಕ್ಕೆರಗುವುದೆ ಹಾದರ, ಕೂಡಲಸಂಗಯ್ಯನು ಅವರ ಮೂಗ ಕೊಯ್ಯದೆ ಮಾಣ್ಬನೆ?