ಬಸವಣ್ಣ   
  ವಚನ - 1403     
 
ಹಾವು ಹದ್ದು ಕಾಗೆ ಗೂಗೆ ಅನಂತಕಾಲ ಬದುಕವೆ? ಬೇಡವೋ ಮಾನವಾ, ಲೇಸೆನಿಸಿಕೊಂಡು ಬದುಕು, ಓ ಮಾನವಾ ಶಿವಭಕ್ತನಾಗಿ. ಅದೆಂತೆಂದಡೆ; 'ಜೀವಿತಂ ಶಿವಭಕ್ತಾನಾಂ ವರಂ ಪಂಚದಿನಾನಿ ಚ ನಾಜಕಲ್ಪಸಹಸ್ರಾಣಿ ಭಕ್ತಿಹೀನಸ್ಯ ಶಾಂಕರಿ' ಎಂದುದಾಗಿ, ನಮ್ಮ ಕೂಡಲಸಂಗಮದೇವರ ಭಕ್ತಿವಿಡಿದು, ಐದು ದಿವಸವಾದಡೂ ಬದುಕಿದಡೆ ಸಾಲದೆ?