ಬಸವಣ್ಣ   
  ವಚನ - 1406     
 
ಹುತ್ತವ ಕಂಡಲ್ಲಿ ಹಾವಾಗಿ, ನೀರ ಕಂಡಲ್ಲಿ (ಒಳ್ಳೆ)ಯಾದವನ ಮಚ್ಚುವನೆ? ಬಾರದ ಭವಂಗಳಲ್ಲಿ ಬರಿಸುವನಲ್ಲದೆ ಮಚ್ಚುವನೆ? ಅಘೋರನರಕವನುಣಿಸುವನಲ್ಲದೆ, ಮಚ್ಚುವನೆ? ಅಟಮಟದ ಭಕ್ತರ ಕಂಡಡೆ, ಕೋಟಲೆಗೊಳಿಸುವ ಕೂಡಲಸಂಗಮದೇವ.