ಬಸವಣ್ಣ   
  ವಚನ - 1407     
 
ಹೆಂಗೂಸಿನಂಗವ ನೋಡಿರೆ ಪುರಾತನರು, ಬಾಲತನದಂಗವ ನೋಡಿರೆ ಪುರಾತನರು, ಬ್ರಹ್ಮವನಾಚರಿಸಿ ತನ್ನ ಮರೆದಿಪ್ಪುದ ನೋಡಿರೆ ಲಿಂಗವಂತರು. ತನ್ನಲ್ಲಿ ತಾನು ನಿಶ್ಚಯವಾಗಿ ಭಾಷೆ ಬೀಸರವೋಗದೆಯಿಪ್ಪ ಇರವು ಕೂಡಲಸಂಗಮದೇವರಲ್ಲಿ ನಮ್ಮ ಮಹದೇವಿಯಕ್ಕಂಗಾಯಿತ್ತು.