ವಚನ - 1     
 
ಅಂಗ ಕ್ರಿಯಾಲಿಂಗವ ವೇಧಿಸಿ, ಅಂಗ ಲಿಂಗದೊಳಗಾಯಿತ್ತು. ಮನ ಅರಿವ ಬೆರಸಿ, ಜಂಗಮಸೇವೆಯ ಮಾಡಿ, ಮನ ಜಂಗಮಲಿಂಗದೊಳಗಾಯಿತ್ತು. ಭಾವ ಗುರುಲಿಂಗದೊಳಗೆ ಬೆರಸಿ, ಮಹಾಪ್ರಸಾದವ ಭೋಗಿಸಿ, ಭಾವ ಗುರುಲಿಂಗದೊಳಗಾಯಿತ್ತು. ಚೆನ್ನಮಲ್ಲಿಕಾರ್ಜುನಾ, ನಿಮ್ಮ ಒಲುಮೆಯಿಂದ ಸಂದಳಿದು ಸ್ವಯಲಿಂಗಿಯಾದೆನು.