ವಚನ - 7     
 
ಅಂಗವಿಕಾರ ಸಂಗವ ಮರೆದು, ಲಿಂಗವನೊಡಗೂಡುತಿಪ್ಪವರ ತೋರಾ ಎನಗೆ. ಕಾಮವಿಕಾರಕತ್ತಲೆಯಳಿದು, ಭಕ್ತಿಪ್ರಾಣವಾಗಿಪ್ಪವರ ತೋರಾ ಎನಗೆ. ತ್ರಿಕರಣ ಶುದ್ಧವಾಗಿ ನಿಮ್ಮ ನೆರೆ ನಂಬಿದ ಸದ್ಭಕ್ತರ ತೋರಾ ಎನಗೆ ಚೆನ್ನಮಲ್ಲಿಕಾರ್ಜುನಾ.