ವಚನ - 22     
 
ಅಮೃತವನುಂಬ ಶಿಶುವಿಂಗೆ ವಿಷವನೂಡುವರೆ ಅಯ್ಯಾ? ನೆಳಲ ತಂಪಿನಲ್ಲಿ ಬೆಳೆದ ಸಸಿಗೆ ಉರಿಯ ಬೇಲಿಯ ಕಟ್ಟುವರೆ ಅಯ್ಯಾ? ಚೆನ್ನಮಲ್ಲಿಕಾರ್ಜುನಯ್ಯಾ, ನಿಮ್ಮ ಕರುಣದ ಕಂದನೊಡನೆ ಸೂನೆಗಾರರ ಮಾತನಾಡಿಸುವರೆ ಅಯ್ಯಾ?