ವಚನ - 33     
 
ಅಯ್ಯಾ, ನೀನೆನ್ನ ಮೊರೆಯನಾಲಿಸಿದಡಾಲಿಸು, ಆಲಿಸದಿರ್ದಡೆ ಮಾಣು. ಅಯ್ಯಾ, ನೀನೆನ್ನ ದುಃಖವ ನೋಡಿದಡೆ ನೋಡು, ನೋಡದಿರ್ದಡೆ ಮಾಣು. ಎನನಗಿದು ವಿಧಿಯೆ? ನೀನೊಲ್ಲದಡೆ ಆನೊಲಿಸುವ ಪರಿಯೆಂತಯ್ಯಾ? ಮನವೆಳಸಿ ಮಾರುವೋಗಿ ಮರೆವೊಕ್ಕಡೆ ಕೊಂಬ ಪರಿಯೆಂತಯ್ಯಾ ಚೆನ್ನಮಲ್ಲಿಕಾರ್ಜುನಾ?