ವಚನ - 63     
 
ಆರೂ ಇಲ್ಲದವಳೆಂದು ಆಳಿಗೊಳಲುಬೇಡ ಕಂಡೆಯಾ? ಏನ ಮಾಡಿದಡೂ ಆನಂಜುವಳಲ್ಲ. ತರಗೆಲೆಯ ಮೆಲಿದು ಆನಿಹೆನು, ಸರಿಯ ಮೇಲೊರಗಿ ಆನಿಹೆನು. ಚೆನ್ನಮಲ್ಲಿಕಾರ್ಜುನಯ್ಯಾ, ಕರ ಕೇಡನೊಡ್ಡಿದಡೆ ಒಡಲನು ಪ್ರಾಣವನು ನಿಮಗರ್ಪಿಸಿ ಶುದ್ಧಳಹೆನು.