ವಚನ - 64     
 
ಆಲಿಸೆನ್ನ ಬಿನ್ನಪವ, ಲಾಲಿಸೆನ್ನ ಬಿನ್ನಪವ, ಪಾಲಿಸೆನ್ನ ಬಿನ್ನಪವ. ಏಕೆನ್ನ ಮೊರೆಯ ಕೇಳೆಯಯ್ಯಾ ತಂದೆ? ನೀನಲ್ಲದೆ ಮತ್ತಿಲ್ಲ ಮತ್ತಿಲ್ಲ. ನೀನೆ ಎನಗೆ ಗತಿ, ನೀನೆ ಎನಗೆ ಮತಿಯಯ್ಯಾ, ಚೆನ್ನಮಲ್ಲಿಕಾರ್ಜುನಯ್ಯಾ.