ವಚನ - 80     
 
ಉದಯಾಸ್ತಮಾನವೆಂಬೆರಡು ಕೊಳಗದಲ್ಲಿ, ಆಯುಷ್ಯವೆಂಬ ರಾಶಿ ಅಳೆದು ತೀರದ ಮುನ್ನ ಶಿವನ ನೆನೆಯಿರೆ! ಶಿವನ ನೆನೆಯಿರೆ! ಈ ಜನ್ಮ ಬಳಿಕಿಲ್ಲ. ಚೆನ್ನಮಲ್ಲಿಕಾರ್ಜುನದೇವರದೇವನ ನೆನೆದು ಪಂಚಮಹಾಪಾತಕರೆಲ್ಲರು ಮುಕ್ತಿವಡೆದರಂದು.