ವಚನ - 86     
 
ಉಳ್ಳುದೊಂದು ತನು, ಉಳ್ಳುದೊಂದು ಮನ. ನಾನಿನ್ನಾವ ಮನದಲ್ಲಿ ಧ್ಯಾನವ ಮಾಡುವೆನಯ್ಯಾ? ಸಂಸಾರವನಾವ ಮನದಲ್ಲಿ ತಲ್ಲೀಯವಾಹೆನಯ್ಯಾ? ಅಕಟಕಟಾ, ಕೆಟ್ಟೆ ಕೆಟ್ಟೆ! ಸಂಸಾರಕ್ಕಲ್ಲಾ, ಪರಮಾರ್ಥಕ್ಕಲ್ಲ; ಎರಡಕ್ಕೆ ಬಿಟ್ಟ ಕರುವಿನಂತೆ: ಬಿಲ್ಲು ಬೆಳವಲಕಾಯನೊಂದಾಗಿ ಹಿಡಿಯಬಹುದೆ ಚೆನ್ನಮಲ್ಲಿಕಾರ್ಜುನಾ?