ವಚನ - 102     
 
ಎನ್ನ ಮಾಯದ ಮದವ ಮುರಿಯಯ್ಯಾ. ಎನ್ನ ಕಾಯದ ಕತ್ತಲೆಯ ಕಳೆಯಯ್ಯಾ. ಎನ್ನ ಜೀವದ ಜಂಜಡವ ಮಾಣಿಸಯ್ಯಾ. ಎನ್ನ ದೇವ ಚೆನ್ನಮಲ್ಲಿಕಾರ್ಜುನಯ್ಯಾ, ಎನ್ನ ಸುತ್ತಿದ ಪ್ರಪಂಚವ ಬಿಡಿಸಾ ನಿಮ್ಮ ಧರ್ಮ!