ವಚನ - 108     
 
ಎಲೆ ಅಣ್ಣಾ ಅಣ್ಣಾ, ನೀವು ಮರುಳಲ್ಲಾ ಅಣ್ಣಾ, ಎನ್ನ ನಿನ್ನಳವೆ? ಹದಿನಾಲ್ಕು ಲೋಕವ ನುಂಗಿದ ಕಾಮನ ಬಾಣದ ಗುಣ ಎನ್ನ ನಿನ್ನಳವೆ? ವಾರುವ ಮುಗ್ಗಿದಡೆ, ಮಿಡಿಹರಿಯ ಹೊಯ್ವರೆ? ಮುಗ್ಗಿದ ಭಂಗವ ಮುಂದೆ ರಣದಲ್ಲಿ ತಿಳಿವುದು. ನಿನ್ನ ನೀ ಸೈರಿಸಿ ಕೈದುವ ಕೊಳ್ಳಿರಣ್ಣಾ, ಚೆನ್ನಮಲ್ಲಿಕಾರ್ಜುನನೆಂಬ ಹಗೆಗೆ ಬೆಂಗೊಡದಿರಣ್ಣಾ.