ವಚನ - 114     
 
ಎಲ್ಲರ ಪ್ರಾಣವಂಗೈಯಲಿದೆ ಎನ್ನ ಪ್ರಾಣ ಜಂಗಮದಲದೆ. ಎಲ್ಲರ ಆಯುಷ್ಯ ಶಿರದಲ್ಲಿ ಬರೆದಿದೆ ಎನ್ನ ಆಯುಷ್ಯ ನಿಮ್ಮಲ್ಲಿ ಸಂದಿದೆ. ಚೆನ್ನಮಲ್ಲಿಕಾರ್ಜುನಾ, ನಿಮ್ಮ ಶರಣರೆನ್ನ ಪ್ರಾಣಲಿಂಗವೆಂದು ಧರಿಸಿದೆನು.