ವಚನ - 118     
 
ಒಂದರಳ ಶಿವಂಗೆಂದ ಫಲದಿಂದ ಶಿವಪದಂಗಳಾದುದ ಕೇಳಿಯರಿಯಾ? ಒಂದರಳನೇರಿಸುವಲ್ಲಿ ಅಡ್ಡವಿಸಿದರೆ ಗೊಂದಣದ ಕುಲಕೋಟಿಗೆ ನರಕ ಕಾಣಾ. ಇಂದು ಚೆನ್ನಮಲ್ಲಿಕಾರ್ಜುನನ ವೇಳೆ ತಡೆದಡೆ ಮುಂದೆ ಬಹ ನರಕಕ್ಕೆ ಕಡೆಯಿಲ್ಲ ಮರುಳೆ.