ವಚನ - 119     
 
ಒಂದಲ್ಲ ಎರಡಲ್ಲ ಮೂರಲ್ಲ ನಾಲ್ಕಲ್ಲ ಎಂಬತ್ತು ನಾಲ್ಕುಲಕ್ಷ ಯೋನಿಯೊಳಗೆ ಬಾರದ ಭವಂಗಳಲ್ಲಿ ಬಂದೆ ಬಂದೆ. ಉಂಡೆ ಉಂಡೆ ಸುಖಾಸುಖಂಗಳ. ಹಿಂದಣ ಜನ್ಮ ತಾನೇನಾದಡೆಯೂ ಆಗಲಿ ಮುಂದೆ ನೀ ಕರುಣಿಸಾ, ಚೆನ್ನಮಲ್ಲಿಕಾರ್ಜುನಾ.